Advertisement
ವೆದರ್ ಮಿರರ್

ಹವಾಮಾನ ವರದಿ | 04.01.2026 | ಸದ್ಯ ಬಿಸಿಲು -ಮೋಡ |ಜ.8ರಿಂದ ಕೆಲವು ಕಡೆ ಮಳೆ ಸಾಧ್ಯತೆ- ಕಾರಣ ಏನು..?

Share

05.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ. ಮೋಡ ಅಥವಾ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಮೇಲೆ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ರಾತ್ರಿ ಸ್ವಚ್ಛ ವಾತಾವರಣ ಇರಬಹುದು. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜ. 7ರ ತನಕ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 8ರಿಂದ ಶ್ರೀಲಂಕಾ ಬಳಿಯ ವಾಯುಭಾರ ಕುಸಿತದ ಪರಿಣಾಮದಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 7ರ ತನಕ ಒಣ ಹವೆ ಮುಂದುವರಿಯಲಿದೆ. 8ರಿಂದ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಸ್ವಚ್ಛ ವಾತಾವರಣ ಕಾಣಿಸುವ ಸಾಧ್ಯತೆ ಇದೆ. ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜ.5 ರಿಂದ ಒಣ ಹವೆ ಮುಂದುವರಿಯಲಿದೆ. ಚಳಿಯ ಪ್ರಮಾಣವು ಸಾಮಾನ್ಯವಾಗಿರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಒಣ ಹವೆ ಹಾಗೂ ಸಾಮಾನ್ಯ ಚಳಿ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜ.7ರಿಂದ ಮತ್ತೆ ಮೋಡ ಹಾಗೂ 8ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಬಂಗಾಳಕೊಲ್ಲಿಯ ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಸ್ವಲ್ಪ ಪ್ರಭಲಗೊಂಡು, ಶ್ರೀಲಂಕಾ ಪೂರ್ವ ಕರಾವಳಿಯ ಮೂಲಕ ತಮಿಳುನಾಡು ಕರಾವಳಿಗೆ ಜ. 8ರಂದು ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಜ.8ರಿಂದ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

15 minutes ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

24 minutes ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

29 minutes ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

22 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

1 day ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago