ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

January 11, 2026
2:11 PM

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡದ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಹ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜ. 14ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಂತರ ಛಳಿಯ ವಾತಾವರಣ ಇದ್ದರೂ, ಭಾರಿ ಛಳಿಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜ. 14ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬೆಳಿಗ್ಗೆಯಿಂದ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ನಂತರ ಮೋಡ ಕಡಿಮೆಯಾದರೂ ಸಂಜೆ, ರಾತ್ರಿ ವೇಳೆ ಅಲ್ಲಿಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜ. 14ರಿಂದ ಒಣ ಹವೆ ಮುಂದುವರಿಯಲಿದೆ. ಸ್ವಲ್ಪ ಮಟ್ಟಿಗೆ ಛಳಿಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಅಥವಾ ನಾಳೆ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಜ. 15ರಿಂದ ಒಣ ಹವೆ ಮುಂದುವರಿಯಲಿದೆ. ಛಳಿಯ ಪ್ರಮಾಣವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು.

ಬಂಗಾಳಕೊಲ್ಲಿಯ ಶ್ರೀಲಂಕಾ ಕರಾವಳಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದರೂ ಅದರ ಪ್ರಭಾವದಿಂದ ರಾಜ್ಯದಲ್ಲಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror