14.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಶಿವಮೊಗ್ಗ ಜಿಲ್ಲೆಯ ಗಡಿ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಈ ಮೋಡ ವಾತಾವರಣವು ಜ. 16ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜ.15ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾವೇರಿ ಜಿಲ್ಲೆಯ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜ. 15ರಿಂದ ಬಿಸಿಲು ವಾತಾವರಣ ಹೆಚ್ಚಿರುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜ. 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಮಧ್ಯಮ ಸ್ತರದ ಗಾಳಿಯ ಉಷ್ಣ ಮಾರುತ ಪರಿಚಲನೆ (anti cyclonic circulation) ಮುಂದುವರಿದಿರುವುದರಿಂದ ರಾಜ್ಯದಲ್ಲಿ ಛಳಿಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.
ಜ. 17ರ ನಂತರ ಉತ್ತರ ಭಾರತದ ಉತ್ತರ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…