24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ.
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗಿದ್ದು, ಇಂದು ರಾತ್ರಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ…
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ…
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ…
ಪ್ರಣಾಮ್ ಎಂ ಪಿ, ಮಠದಗದ್ದೆ, 4 ನೇ ತರಗತಿ, ಕೆಪಿಎಸ್ ಶಾಲೆ, ಬೇಗಾರ್, …
ನಿರ್ವಿ ಜಿ ಎಂ, 2 ನೇ ತರಗತಿ, ಸರ್ಕಾರಿ ಶಾಲೆ , ಬಳ್ಪ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490