Advertisement
ವೆದರ್ ಮಿರರ್

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

Share

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ 24 ಅಥವಾ 25ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 21ರಿಂದ ಮಳೆಯ ಪ್ರಮಾಣ ಇಳಿಕೆಯಾಗದರೂ 24ರಿಂದ 2 ಅಥವಾ 3 ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮೇ 21ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಮೇ 22ರಿಂದ ಮಳೆಯ ಪ್ರಮಾಣ ಇಳಿಕೆಯಾಗಲಿದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಕರಾವಳಿಯಲ್ಲಿ ಅರಬ್ಬಿ ಸಮುದ್ರದ ಮೋಡಗಳಿಂದ ಮಳೆಯಾಗುತ್ತಿದ್ದರೆ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಬಂಗಾಳ ಕೊಲ್ಲಿಯ ಭಾಗದಿಂದ ಮೋಡಗಳು ಪಶ್ಚಿಮಕ್ಕೆ ಸೆಳೆಯಲ್ಪಡುವುದರಿಂದ ಮಳೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

16 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

16 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

17 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago