ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

May 29, 2025
2:42 PM

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 30ರ ತನಕ ಉತ್ತರ ಕನ್ನಡ ಸಾಮಾನ್ಯ ಹಾಗೂ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಮೇ 31ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 1ರಿಂದ ಮಳೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಗಳಿದ್ದು, ಜೂನ್ 4ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 30ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 31ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶದ ಕರಾವಳಿ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರೊಂದಿಗೆ ಮುಂಗಾರು ಮಾರುತಗಳು ದುರ್ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ.
ಮುಂದಿನ 2 ದಿವಸಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror