01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ತೀರ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗಿದ್ದು, ಜೂ. 4ರ ತನಕ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಮಲೆನಾಡು : ಕೊಡಗು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಜೂನ್ 5ರಿಂದ ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಮುಂಗಾರು ಬಲಗೊಳ್ಳಲು ಸಮಯ ಬೇಕಾಗಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel