Advertisement
ವೆದರ್ ಮಿರರ್

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

Share

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳ ನೈಜ ಸ್ವರೂಪ ನಿನ್ನೆಯಿಂದ ಕರಾವಳಿ ಭಾಗಗಳಲ್ಲಿ ತೋರುತ್ತಿದೆ. ಜೂನ್ 14ರಿಂದ ಸ್ವಾಭಾವಿಕ ಹಾದಿಯಲ್ಲಿ ಸಾಗುತ್ತಿರುವುದೇ ಇದಕ್ಕೆ ಕಾರಣ. ಜೂನ್ 13ರ ತನಕ ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿರುವ ಪರಿಣಾಮದಿಂದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಭಾರಿ ಮಳೆಯಾಗಿತ್ತು. ಈಗಿನಂತೆ ಜೂನ್ 18ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 17ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಒಳನಾಡಿನ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

ಮಹಾರಾಷ್ಟ್ರದ ಮುಂಬೈ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಹಾರಾಷ್ಟ್ರ ಕರಾವಳಿಯಲ್ಲೆ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂಬೈ ಭಾರಿ ಮಳೆಯ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಮುಂಗಾರು ಮತ್ತಷ್ಟು ಬಲಗೊಳ್ಳುಲು ಕಾರಣವಾಗಿದೆ.
ಈ ಎರಡೂ ತಿರುಗುವಿಕೆಯು ದುರ್ಬಲಗೊಂಡಂತಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

9 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

9 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

19 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

19 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

20 hours ago