23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯಲ್ಲಿ ಮತ್ತು ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕು ಸ್ವಲ್ಪ ಕಡಿಮೆ ಇದ್ದರೂ, ಮಧ್ಯಾಹ್ನ ನಂತರ ಹೆಚ್ಚಾಗುವ ಸಾಧ್ಯತೆ ಇದೆ. ಈಗಿನಂತೆ ಜೂನ್ 23ರಿಂದ ಸ್ವಲ್ಪ ಕಡಿಮೆ ಇದ್ದರೂ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇರಬಹುದು. ಜೂನ್ 29ರಿಂದ ಅವಕಾಶ ಸಿಗಬಹುದು.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 26ರಿಂದ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…