ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ

July 4, 2025
12:56 PM

05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಕ್ಷಿಣ ಧ್ರುವದ ಕಡೆಯಿಂದ ಬೀಸುತ್ತಿರುವ ಪ್ರಭಲ ಗಾಳಿಯ ಪ್ರಭಾವದಿಂದ (ಸೊಮಾಲಿಯಾನ್ ಜಟ್ ವೇವ್ಸ್ ರೀತಿಯ) ಕಳೆದ ಮೂರು ದಿನಗಳಿಂದ ಮುಂಗಾರು ಜೊತೆಗೂಡಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕೇರಳದಲ್ಲಿ ಈಗಾಗಲೇ ಮುಂಗಾರು ದುರ್ಬಲಗೊಳ್ಳುತ್ತಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಸಣ್ಣ ಅವಕಾಶಗಳು ಮಾತ್ರ ಸಿಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಜುಲೈ 6ರಿಂದ ಔಷಧಿ ಸಿಂಪಡಿಸಲು ಸಣ್ಣ ಅವಕಾಶಗಳು ಸಿಗಬಹುದು.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror