ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

March 18, 2025
2:03 PM
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ ಅಲ್ಲಲ್ಲಿ, ಮಲೆನಾಡು ಭಾಗದ ಕೆಲವೆಡೆ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮಾರ್ಚ್ 24ರ ತನಕವೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 25 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.

19.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹಗರಣ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮಾರ್ಚ್ 24ರ ತನಕವೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 25 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹಗುರ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಾರ್ಚ್ 25ರಿಂದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 22ರಿಂದ ಅಲ್ಲಲ್ಲಿ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror