19.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹಗರಣ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮಾರ್ಚ್ 24ರ ತನಕವೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 25 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹಗುರ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಾರ್ಚ್ 25ರಿಂದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 22ರಿಂದ ಅಲ್ಲಲ್ಲಿ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…