18.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಹನಿ ಮಾತ್ರ ಇರಬಹುದು. ಈಗಿನಂತೆ ಮಾರ್ಚ್ 22 ಅಥವಾ 23ರ ನಂತರ ಸ್ವಲ್ಪ ಮಳೆಯ ಸಾಧ್ಯತೆ ಕಾಣಿಸುತ್ತಿದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ಮಾರ್ಚ್ 23ರ ನಂತರ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಗೋಚರಿಸುತ್ತಿದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಹಾಗೂ ರಾಮನಗರ ಜೆಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ಮಾರ್ಚ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಧ್ಯಾಹ್ನ ನಂತರ ಅರಬ್ಬಿ ಸಮುದ್ರದ ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಕರಾವಳಿ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…