14.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು ಒಂದೆರಡು ಕಡೆ ರಾತ್ರಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣವು ಮುಂದುವರಿಯುವ ಲಕ್ಷಣಗಳಿದ್ದು, ವಾರದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ದಿನ ಬಿಟ್ಟು ದಿನ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿಯ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಮಾರ್ಚ್ 17 ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಸ್ವಲ್ಪ ತಡವಾಗಬಹುದು.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…