05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ. ಗರಿಷ್ಠ ತಾಪಮಾನದಲ್ಲಿ ಒಂದೆರಡು ಡಿಗ್ರಿ ಕಡಿಯಾದರೂ, ಅಧಿಕ ತೇವಾಂಶದಿಂದ ಸೆಖೆ ಹೆಚ್ಚಾಗಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈ ವಾತಾವರಣವು ಮಾರ್ಚ್ 8ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮೋಡ ಕಡಿಮೆಯಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ಮಾರ್ಚ್ 8ರ ತನಕ ಮುಂದುವರಿಯುವ ಈ ವಾತಾವರಣವು, ನಂತರ ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ.
ಅಲ್ಲಲ್ಲಿ ಮೋಡದ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಶ್ರೀಲಂಕಾ ಕರಾವಳಿ ಬಳಿಯಿರುವ ತಿರುಗುವಿಕೆಯು ಶ್ರೀಲಂಕಾದ ಆಗ್ನೇಯಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಭಾಗದಿಂದ ಆಂದ್ರಾ ಮೂಲಕ ರಾಜ್ಯಕ್ಕೆ ಬೀಸುತ್ತಿರುವ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…