WeatherMirror | 21-09-2023 | ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ | ಸೆ.27 ರಿಂದ 3 ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಮಳೆ ಸಾಧ್ಯತೆ |

September 21, 2023
3:16 PM

22.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ದಕ್ಷಿಣ ಕನ್ನಡ ಗಡಿಭಾಗಗಳ ಸುತ್ತಮುತ್ತ, ಧರ್ಮಸ್ಥಳ, ಕಾರ್ಕಳ, ಕುದುರೆಮುಖ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡ, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಇರಬಹುದು.

ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಗದಗ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಸೆ.22ರ ತನಕ ಉತ್ತರ ಒಳನಾಡು ಹಾಗೂ ಸೆ. 24ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಸೆ.27ರಿಂದ 3 ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror