Advertisement
ಅನುಕ್ರಮ

#ಕೃಷಿಮಾತು | ತೋಟದ ಕಳೆ ನಾಶಕ್ಕೆ ಸಾವಯವ ಪರಿಹಾರ ಏನು ? | ಕೃಷಿಕ ಎ ಪಿ ಸದಾಶಿವ ಮರಿಕೆ ಬರೆಯುತ್ತಾರೆ |

Share
ಕೃಷಿಕ ಎ ಪಿ ಸದಾಶಿವ ಅವರು ತೋಟಕ್ಕೆ ಕಳೆನಾಶಕ ಸಿಂಪಡಣೆ ಹಾಗೂ ಅದರ ಪರಿಣಾಮಗಳ ಬಗ್ಗೆ ಈ ಹಿಂದೆ ಬರೆದಿದ್ದರು. ಈ ಸಮಯದಲ್ಲಿ ಬಂದ ಪ್ರಶ್ನೆಗಳಿಗೆ ಸಾವಯವ ಮಾದರಿಯಲ್ಲಿ ಉತ್ತರಿಸಿದ್ದಾರೆ ಇಲ್ಲಿ. ಅದರ ಯಥಾವತ್ತಾದ ಬರಹ ಇಲ್ಲಿದೆ…

ನಿರಂತರ ಕಳೆನಾಶಕವನ್ನು ಬಿಟ್ಟುದರ ಪರಿಣಾಮವಾಗಿ ಪಾಚಿ ಬೆಳೆದ ತೋಟ ಒಂದರ ಚಿತ್ರಸಹಿತ, ಕಳೆನಾಶಕದ ಧೂರ್ತ ಮುಖದ ಪರಿಚಯದ ಲೇಖನವೊಂದು ಬರೆದಿದ್ದೆ. ಆ ಲೇಖನದ ಮುನ್ನಲೆಯಲ್ಲಿ ಬಂದ ಪ್ರಶ್ನೆಗಳೆರಡು ನನ್ನ ಗಮನ ಸೆಳೆದಿತ್ತು.

  • ಪಾಚಿ ಬೆಳೆದ ತೋಟದಿಂದ ಸಮಸ್ಯೆ ಏನು? ನಿರ್ವಹಣೆಗೆ ಅನುಕೂಲ ಅಲ್ಲವೇ?
  • ಕಳೆ ನಾಶಕ್ಕೆ ಪರ್ಯಾಯ ಏನು? ಸಾವಯವ ಕಳೆನಾಶಕ ಎಂಬುದು ಇದೆಯೇ?

ನಿರಂತರ ಅಡಿಕೆ ಸುಲಿಯುವವನ, ಕೊಟ್ಟು ಪಿಕಾಸಿನ ಕೆಲಸ ಮಾಡುವವನ ಹಸ್ತವನ್ನು ಪರೀಕ್ಷಿಸಿದ್ದೀರಾ? ಗಟ್ಟಿಯಾಗಿ ದಡ್ದು ಕಟ್ಟಿರುವುದನ್ನು ಕಂಡಿರಬಹುದು. ಆ ಜಾಗಕ್ಕೆ ಸ್ಪರ್ಶಜ್ಞಾನ ಇರುವುದಿಲ್ಲ. ಇದ್ದರೂ ಬಲು ಸ್ವಲ್ಪ. ಅಪರೂಪಕ್ಕೆ ಕೆಲವೊಮ್ಮೆ ಕೆಲವರಿಗೆ ದಡ್ಡು ಒಡೆದು ರಕ್ತ ಜಿನುಗುವುದನ್ನು ಕಂಡಿರಬಹುದು. ತೀವ್ರ ನೋವು ಅನುಭವಿಸಿರುವುದನ್ನು ಕೇಳಿರಬಹುದು. ಆ ಗಟ್ಟಿತನ ಮನುಷ್ಯನ ಸಂಪೂರ್ಣ ಶರೀರದಲ್ಲಿ ಇದ್ದರೆ ಏನಾಗಬಹುದು ಊಹಿಸಿಕೊಳ್ಳಿ. ಅದೇ ರೀತಿ ನಿರಂತರ ಕಳೆನಾಶಕ ಬಳಕೆಯ ಪರಿಣಾಮದಿಂದ ಸಸ್ಯ ಬೆಳವಣಿಗೆ ಇಲ್ಲದೆ, ಸೂರ್ಯನ ಶಾಖದಿಂದ, ಮಳೆಯ ಹೊಡೆತದಿಂದ, ಗಾಳಿಯ ಸ್ಪರ್ಶದಿಂದ ಭೂಮಿ ಗಟ್ಟಿಯಾಗುತ್ತಾ ಸಾಗುತ್ತದೆ. ನೀರು ಭೂಮಿಗೆ ಇಂಗಲು ಸಮಸ್ಯೆಯಾಗುವುದು. ನೀರು ಬಳಸುವ ಪ್ರಮಾಣ ಜಾಸ್ತಿ ಬೇಕಾಗುವುದು. ಭೂಮಿಯನ್ನು ಸಡಿಲಗೊಳಿಸುವ ಸೂಕ್ಷ್ಮಾಣು ಜೀವಿಗಳ ಆವಾಸಸ್ಥಾನ ಕುಸಿದು ಬೀಳುವುದು.

ಹಳೆಯ ಕೃಷಿ ಪದ್ಧತಿಯಲ್ಲಿ ಗಟ್ಟಿಯಾದ ಭೂಮಿಯನ್ನು ಅಗತೆ ಮಾಡುವ ಕ್ರಮವಿತ್ತು. ಕಾಲಾಂತರದಲ್ಲಿ ದೊರೆಯದ ಮಾನವ ಶ್ರಮದಿಂದಾಗಿ ಕಳೆಗಳೇ ತನ್ನ ಬೇರಿನ ರೂಪದಲ್ಲಿ ಮತ್ತು ಎರೆಹುಳು, ನರ್ತೆಗಳು ಭೂಮಿಯಲ್ಲಿ ಮಾಡುವ ರಂದ್ರಗಳಿಂದಾಗಿ ಭೂಮಿ ಸಡಿಲಗೊಳ್ಳುತ್ತದೆ ಎಂಬುದನ್ನು ಕೊಂಡುಕೊಂಡೆವು. ಕಳೆಗಳೇ ಕಳಿತು ಗೊಬ್ಬರವಾಗುವ ಪರಿಣಾಮದಂದಾಗಿ ಭೂಮಿಯಲ್ಲಿ ಸಾವಯವ ಇಂಗಾಲದ ಅಂಶ ಏರುವುದೆಂದೂ, ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೆಚ್ಚುವುದೆಂಬುದು ಸರ್ವಸಮ್ಮತ ಅಭಿಪ್ರಾಯ. ದಡ್ಡು ಕಟ್ಟಿದ ಮಾನವ ಶರೀರಕ್ಕೆ ಯಾವ ಅಪಾಯ ಬರಬಹುದೋ, ಅದೇ ರೀತಿಯ ಅಪಾಯಗಳು ನಮ್ಮ ಭೂಮಿಗೆ ಬರಬಹುದು ಎಂಬ ಎಚ್ಚರ ನಮಗಿರಬೇಕು.

ಸಾವಯವ ತತ್ವದಲ್ಲಿ ನಾಶಕಗಳು ಎಂಬ ಪದಕ್ಕೆ ಅರ್ಥವಿಲ್ಲ. ಕೇವಲ ನಿಯಂತ್ರಕಗಳು ಮಾತ್ರ. ಆ ದೃಷ್ಟಿಯಿಂದ ಯೋಚಿಸುವುದಾದರೆ ನಾನು ಕಂಡುಕೊಂಡ ಎರಡು ದಾರಿಗಳು.

ಮಾನವ ಶ್ರಮದಿಂದಲೇ ಕತ್ತಿಯಲ್ಲಿ ಹೆರೆದು ತೆಗೆದು ಬರುವ ಕಳೆಯನ್ನು ನಿಯಂತ್ರಿಸುತ್ತಿದ್ದ ನನಗೆ ಪರ್ಯಾಯವಾಗಿ ಕಂಡುಕೊಂಡದ್ದು ಹುಲ್ಲು ಕತ್ತರಿಸುವ ಯಂತ್ರಗಳು. ಪೆಟ್ರೋಲು ಸುಡುವುದರಿಂದ ಆಗುವ ವಾಯುಮಾಲಿನ್ಯ ಅಲ್ಪಸ್ವಲ್ಪ ಇದ್ದರೂ ಸಾಕಷ್ಟು ಪರಿಸರ ಸ್ನೇಹಿ ಎಂದು ಎನಿಸಿಕೊಳ್ಳುತ್ತದೆ. ಆದರೆ ವರುಷದಲ್ಲಿ ಕೊನೆಯ ಪಕ್ಷ ಎರಡು ಸರ್ತಿಯಾದರೂ ನಿಯಂತ್ರಿಸದೆ ಇದ್ದರೆ ಅಡಿಕೆ ಬೆಳೆ ಸಂಗ್ರಹ ಸ್ವಲ್ಪ ಕಷ್ಟವೇ ಸರಿ. ತಗಲುವ ವೆಚ್ಚ ಅಪಾರ ಎಂದು ಕಂಡುಬಂದುದರಿಂದ ಸಾಧ್ಯವಾದಷ್ಟು ಒಂದೇ ಸರ್ತಿಗೆ ಸೀಮಿತಗೊಳಿಸಿದ್ದೆ. ಆದರೆ ಹುಲ್ಲಿನ ಮಧ್ಯದಲ್ಲಿ ಅಡಿಕೆ ಹೆಕ್ಕುವ ಕಷ್ಟ ಮತ್ತು ಉಳಿದು ಹಾಳಾಗುವ ಬೆಳೆ ನಷ್ಟ ಹೊಸ ದಾರಿ ಒಂದನ್ನು ಹುಡುಕುತ್ತಿತ್ತು. ಮಿತ್ರರನೇಕರು ಮಾಡಿ ನೋಡಿ ಗೆದ್ದ ಸಲಹೆ ತೋಟಕ್ಕೆ ದನಗಳನ್ನು ಬಿಡುವುದು. ತೋಟದಿಂದ ಹೊರ ಹೋಗದಂತೆ ( ಬೇರೆಯವರಿಗೆ ಉಪದ್ರ ಆಗದಂತೆ )ಸಾಕಷ್ಟು ಗಟ್ಟಿಯಾದ ಬೇಲಿಯ ನಿರ್ಮಾಣ ಮಾಡಿ ದನಗಳನ್ನು ಬಿಡಹೊರಟೆ.

ಮೊದಲಿಗೆ ಒಂದು ಎಕರೆ ಜಾಗದ ತೋಟದಲ್ಲಿ ಆರಂಭ ಮಾಡಿದೆ. ತುಂಬಾ ಪ್ರಯೋಜನಕಾರಿ ಎಂದು ಕಂಡು ಬಂದುದರಿಂದ ಸಂಪೂರ್ಣ ಆರು ಎಕರೆಗೆ ವಿಸ್ತರಿಸಿದೆ. ಸುಮಾರು ಒಂದು ಅಡಿ ಗಿಂತ ಜಾಸ್ತಿ ಬೆಳೆದು ನಿಂತಿದ್ದ ಹುಲ್ಲು 15 ರಷ್ಟು ದನಗಳು ಹೋಗಿ ಒಂದು ತಿಂಗಳಲ್ಲಿ ತಿಂದು ಮುಗಿಸಿದ್ದವು . ಬೇಸಿಗೆಯಲ್ಲೂ ಹುಲ್ಲಿನ ಎಡೆಯಲ್ಲಿ ಅಡಗಿ ಕುಳಿತಿದ್ದ ಅಡಿಕೆ ಕೂಡ ಹೆಕ್ಕಿಸಿಕೊಳ್ಳಲು ತಯಾರಾಗಿದ್ದವು. ಹಸಿದ ದನಗಳ ಹೊಟ್ಟೆತುಂಬಿಸುವಲ್ಲಿಯೂ ಬಲು ದೊಡ್ಡ ಉಪಕಾರವನ್ನೇ ಕಂಡಿತ್ತು.

ಅಡಿಕೆ ಹೆಕ್ಕುವ ಕೃಷಿ ಸಹಾಯಕಿಯ ಬಾಯಿಯಲ್ಲಿ ಉದ್ಘಾರವೊಂದು ಹೊರಬಂತು. ಎಷ್ಟು ಸಮಯದಿಂದ ಹುಲ್ಲಿನ ಮಧ್ಯೆಯಲ್ಲಿ ಅಡಿಕೆ ಕಾಣದೆ, ಕಾಣದ ಗುಂಡಿಯಲ್ಲಿ ಬಿದ್ದೆದ್ದುಕೊಂಡು ಆಗುವ ಸಮಸ್ಯೆಗೆ ತುಂಬಾ ಚೆನ್ನಾದ ಪರಿಹಾರ ಸಿಕ್ಕಿತು. ಇಷ್ಟು ಉಪಕಾರ ದನಗಳಿಂದ ಆಗಬಹುದು ಎಂಬ ಕಲ್ಪನೆಯೇ ಇರಲಿಲ್ಲ. ಮದ್ದಿನ ಬೇರೂ ಸಿಗದಂತೆ ಮಾಡುವ ಮದ್ದು ಬಿಡುವುದರಿಂದ ಇದು ಸಾವಿರಪಾಲು ಲೇಸು

ಶಾಲೆಯ ಮೆಟ್ಟಿಲನ್ನೇ ಹತ್ತದ ಮಹಿಳೆಯೊಬ್ಬಳ ಬಾಯಲ್ಲಿ ಬಂದ ಮಾತುಗಳು ವಿದ್ಯಾವಂತರೆನಿಸಿಕೊಂಡ ನಮ್ಮಂತವರ ಮುಖಕ್ಕೆ ರಾಚಿದಂತ್ತಿತ್ತು. ಅದೆಷ್ಟು ವಿಧದ ಔಷಧಿ ಸಸ್ಯಗಳ ಹೆಸರು ಮತ್ತು ಮಹತ್ವವನ್ನು ಕಳಕೊಂಡಿದ್ದೇವೆ ಎಂಬುದರ ಸೂಚನೆ ಆಕೆಯದ್ದು ಎಂದು ಅರ್ಥ ಆಗಿತ್ತು.

ದನಗಳನ್ನು ಬಿಡುವಾಗ ಸಮಸ್ಯೆ ಇಲ್ಲವೇ ಇಲ್ಲ ಎಂದಲ್ಲ.ತೋಟದಲ್ಲಿ ಹುಲ್ಲು ಮುಗಿದಾಗ ಎಳೆಯ ಅಡಿಕೆ ಗಿಡಗಳಿಗೆ ಬಾಯಿ ಹಾಕುತ್ತವೆ. ಬಾಳೆಯ ಸಣ್ಣ ಕುರುಳೆ ಗಳನ್ನು ತಿನ್ನುತ್ತವೆ. ಎಳೆಯ ಕೊಕ್ಕೋ ಮಿಡಿಗಳಿದ್ದರೆ ಕಥಮ್. ಪದಾಘಾತಕ್ಕೆ ಸಿಲುಕಿದ ಸ್ಪಿಂಕ್ಲರ್ ಕುಟ್ಟಿಗಳು ಮಠಾಶ್.

ಇವುಗಳಿಗೂ ಪರಿಹಾರವನ್ನು ಕಂಡುಕೊಂಡೆ. ಹುಲ್ಲು ಕಡಿಮೆಯಾದಾಗ ತೋಟಕ್ಕೆ ಬಿಡುವುದಕ್ಕೆ ರಜೆ ಕೊಡಬೇಕಾಗುತ್ತದೆ.15 ದಿನದಲ್ಲಿ ಚಿಗುರಿದರೆ ಪುನಹ ಬಿಟ್ಟರೆ ಸರಿ ಹೊಂದುತ್ತದೆ.ಕೊಕ್ಕೋ ಮಿಡಿ ಇರುವ ಸಮಯ ಅಂದರೆ ಜೂನ್ ಕೊನೆಯವರೆಗೆ ಬಿಡುವ ಹಾಗಿಲ್ಲ. ಡಿಸೆಂಬರ್ ಅಂತ್ಯದವರೆಗೆ ಬಿಟ್ಟರೆ ಸಾಕು. ಆನಂತರ ಬೇಕು ಎಂದು ಅನಿಸಿದರೆ ಒಂದಾವರ್ತಿ ಯಂತ್ರದ ಮೊರೆ ಹೋಗಬೇಕಾಗಬಹುದು.

ಮಣ್ಣೂ ಹಾಳಾಗದೆ, ಪ್ರಕೃತಿಗೂ ಮಾರಕವಾಗದೆ ಯಾವುದೇ ನಾಶಕದ ಮೊರೆ ಹೋಗದೆ, ಗೋವನ್ನು ಉಳಿಸಿಕೊಂಡು ಮಾಡುವ ಕೃಷಿ ಅತ್ಯಂತ ದೊಡ್ಡ ಪರಿಹಾರವಲ್ಲವೇ?. ಕೆಲದಿನಗಳ ಹಿಂದೆ ಭೇಟಿಯಾದ ಸಹಜ ಕೃಷಿಕನೊಬ್ಬನ ಮಾತು ತುಂಬಾ ಮಾರ್ಮಿಕ. ಅತಿಯಾದ ವಿಸ್ತರಣೆಯ ಕೃಷಿ, ಭೂಮಿಯ ಸತ್ವವನ್ನು ಹೀರಿ ಮಾಡುವ ಕೃಷಿ, ಮುಂದಿನ ಪೀಳಿಗೆಯ ಬದುಕಿನ ಹಕ್ಕನ್ನು ಮತ್ತು ಸಾಮರ್ಥ್ಯವನ್ನು ಕಿತ್ತುಕೊಂಡಂತೆ. ಭೂಮಿ ಎಂಬುದು ಬ್ಯಾಂಕಿನ ನಿರಖು ಠೇವಣಿಯಂತೆ.ಅನಗತ್ಯ ಬಳಸಿದರೆ ಬದುಕನ್ನೇ ಹಾಳು ಮಾಡಿಕೊಂಡಂತೆ .ಈ ಮಾತುಗಳನ್ನು ಮತ್ತೆ ಮತ್ತೆ ನೆನೆಯುತ್ತಾ ಕೇಳುತ್ತಿರುವ ಅಂಬಾರವದತ್ತ ಗಮನಹರಿಸುವೆ.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

3 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

12 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

19 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago