Advertisement
MIRROR FOCUS

#Chandrayana3 | ಚಂದ್ರನ ಅಂಗಳಕ್ಕೆ ಹತ್ತಿರವಾದಾಗ ಗೆಳೆಯನನ್ನು ಸ್ವಾಗತಿಸಿದ ಚಂದ್ರಯಾನ2 |

Share

ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ಗೆ ಪ್ರಯತ್ನಿಸಲು ಕೇವಲ ಎರಡು ದಿನಗಳು ಬಾಕಿ ಇರುವ ವೇಳೆ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಆರ್ಬಿಟರ್‌ನೊಂದಿಗೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.  ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರಯಾನ-2 ಮಿಷನ್‌ನ ಲ್ಯಾಂಡರ್ ಕಳೆದುಹೋದರೂ, ಪ್ರದಾನ, ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿತ್ತು. ಹೀಗಾಗಿ ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ  ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು.

ಆಗಸ್ಟ್ 21ರಂದು ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಇತ್ತೀಚಿನ ನವೀಕರಣವನ್ನು ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ಸಮಯವನ್ನು ಆಗಸ್ಟ್ 23ರಂದು ಸಂಜೆ 6.04ಕ್ಕೆ ಇರಿಸಲಾಗಿದೆ. ಈ ಬಾರಿ ಲ್ಯಾಂಡಿಂಗ್‌ ವೇಳೆ ಯಾವುದೇ ಅಪಾಯವನ್ನು ತಪ್ಪಿಸಲು ಕ್ಯಾಮಾರ ಬಳಸಿ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುವ ಈ ಕ್ಯಾಮೆರಾವನ್ನು ಇಸ್ರೋ ಬಳಕೆ ಮಾಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

11 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

14 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

18 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago