ಪಶ್ಚಿಮ ಘಟ್ಟ ಸೂಕ್ಷ್ಮ ಪರಿಸರ ಪ್ರದೇಶ | ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯ | ಅರಣ್ಯ ಸಚಿವ ಈಶ್ವರ್ ಖಂಡ್ರೆ

September 19, 2024
8:35 PM
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ  16 ಸಾವಿರದ 114 ಚದರ ಕಿಲೋಮೀಟರ್ ಸೂಕ್ಷ್ಮ ಪರಿಸರ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದೆ ಎಂದು ಹೇಳಿದರು. ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.

ಪಶ್ಚಿಮಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಕುರಿತಂತೆ ರಾಜ್ಯ ಸರ್ಕಾರ ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

Advertisement
Advertisement
Advertisement

ವಿಧಾನಸೌಧದಲ್ಲಿ  ನಡೆದ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕಸ್ತೂರಿ ರಂಗನ್ ಸಮಿತಿ ನೀಡಿರುವ ವರದಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 2 ರಂದು 6ನೇ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ಈ ಮಾಸಾಂತ್ಯದೊಳಗೆ ಕಳುಹಿಸಬೇಕಾಗಿದೆ. ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಈಗಾಗಲೇ ತನ್ನ ನಿಲುವನ್ನು ಕೇಂದ್ರಕ್ಕೆ ಹಲವು ಬಾರಿ ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

Advertisement

ಅದಕ್ಕೂ ಮೊದಲು ಸಭೆಗೆ ವಿವರಿಸಿದ ಸಚಿವ ಈಶ್ವರ ಖಂಡ್ರೆ,  ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ  16 ಸಾವಿರದ 114 ಚದರ ಕಿಲೋಮೀಟರ್ ಸೂಕ್ಷ್ಮ ಪರಿಸರ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದೆ ಎಂದು ಹೇಳಿದರು. ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ನೀಡಿದ್ದಾರೆ. ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರಸರ್ಕಾರದ್ದಾಗಿದ್ದು, ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಈ  ಮಾಸಾಂತ್ಯದೊಳಗೆ ರಾಜ್ಯ ಸರ್ಕಾರ ನಿಲುವು ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ  11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ  ಸಭೆ ನಡೆಸಿದರು.  ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಯಿತು.

Advertisement

ಈಗಾಗಲೇ ರಾಜ್ಯದಲ್ಲಿ 16 ಸಾವಿರದ 114 ಚದರ ಕಿಲೋಮೀಟರ್ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ ಎಂದು ಹಲವು ಜನಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದ್ದಾರೆ.  ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ.  ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ.

The central government issued the 6th notification on August 2 to enforce the recommendations of the Kasturi Rangan Committee report on the Western Ghats Environmentally Sensitive Area. In light of this, the state’s stance must be communicated to the central government by the end of the current month.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror