ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 21 ಮತ್ತು 22 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗಾಳಿ, ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel