ರಾಜ್ಯ ಬಜೆಟ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಸಿದ್ದರಾಮಯ್ಯ ಕೊಡುಗೆ ಏನು ?

February 16, 2024
1:01 PM

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ತಮ್ಮ ದಾಖಲೆಯ 15ನೆಯ ಬಾರಿ ಬಜೆಟ್(Budget) ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ(Election Year) ಆಗಿರೋದ್ರಿಂದ ಈ ಬಜೆಟ್ ಬಗ್ಗೆ ಜನಸಾಮಾನ್ಯರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ವಿವಿಧ ವಲಯಗಳಿಗೆ ಬಜೆಟ್‌ನಲ್ಲಿ ಅನುದಾನವನ್ನು ಘೋಷಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೂ ಅನುದಾನವನ್ನು ಮೀಸಲಿಡಲಾಗಿದೆ.

Advertisement
Advertisement
Advertisement
Advertisement

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.

Advertisement

ಜೊತೆಗೆ, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು,  ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಘೋಷಿಸಲಾಗಿದ್ದು,  Cerebral Palsy, Muscular Dystrophy, Parkinson’s ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನು, ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು, ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನು, ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು ಎಂದಿದ್ದಾರೆ.

Advertisement

ಇನ್ನು,  ನಿವೇಶನ ಹೊಂದಿರುವ ವಸತಿ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು, ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ  86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.  ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror