ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ತಮ್ಮ ದಾಖಲೆಯ 15ನೆಯ ಬಾರಿ ಬಜೆಟ್(Budget) ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ(Election Year) ಆಗಿರೋದ್ರಿಂದ ಈ ಬಜೆಟ್ ಬಗ್ಗೆ ಜನಸಾಮಾನ್ಯರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ವಿವಿಧ ವಲಯಗಳಿಗೆ ಬಜೆಟ್‌ನಲ್ಲಿ ಅನುದಾನವನ್ನು ಘೋಷಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೂ ಅನುದಾನವನ್ನು ಮೀಸಲಿಡಲಾಗಿದೆ.
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಜೊತೆಗೆ, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು, ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಘೋಷಿಸಲಾಗಿದ್ದು, Cerebral Palsy, Muscular Dystrophy, Parkinson’s ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಇನ್ನು, ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು ಎಂದಿದ್ದಾರೆ.
ಇನ್ನು, ನಿವೇಶನ ಹೊಂದಿರುವ ವಸತಿ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು, ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…