MIRROR FOCUS

Karnataka Budjet | ರಾಜ್ಯ ಬಜೆಟ್‌ನಲ್ಲಿ ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕಾ ವಲಯಕ್ಕೆ ಏನಿದೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸೀಎಂ ಸಿದ್ಧರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್ ನಲ್ಲಿ ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕಾ ವಲಯಕ್ಕೆ ಏನಿದೆ..? ಇಲ್ಲಿದೆ ವಿವರ..

Advertisement

ತೋಟಗಾರಿಕಾ ಕ್ಷೇತ್ರ :

1. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು.

2. ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

3. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. 46. ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು.

Advertisement

4. ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ Carbon Credit ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಅನುಕೂಲವಾಗುವಂತೆ ಉತ್ತೇಜನ ನೀಡಲಾಗುವುದು.

5. ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ನ್ನು (Spice Park) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

6. ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.

ರೇಷ್ಮೆ ವಲಯ :

1. ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

Advertisement

2. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು. 3. ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು.

ಪಶುಸಂಗೋಪನೆ-ಹೈನುಗಾರಿಕೆ :

1. ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು

• ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.

• ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು.

Advertisement

• ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು.

• ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.

2. ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು.

3. ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು.

4. ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:

Advertisement

• ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.

• ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ ಹಾಕಲಾಗುವುದು.

• ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.

• ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು.

5. ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು.

Advertisement

ಮೀನುಗಾರಿಕಾ ವಲಯ:

1. ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು;

• ಹೊನ್ನಾವರ ತಾಲ್ಲೂಕಿನ ಮಂಕಿ/ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ.

• ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ.

• ಆಕ್ವಾ ಪಾರ್ಕ್‌ಗಳ ಸ್ಥಾಪನೆ.

Advertisement

• ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ.

• ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ.

2. ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.

3. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.

4. 2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು.

Advertisement

5. ರಾಜ್ಯದಲ್ಲಿನ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

6. ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮನೆಗೆ ಇಡುವ ಹೆಸರನ್ನು ಯಾವ ಅಕ್ಷರದಿಂದ ಆರಂಭಿಸಿದರೆ ಉತ್ತಮ..?

ಜ್ಯೋತಿಷ್ಯಶಾಸ್ತ್ರ ಮತ್ತು ವಾಸ್ತು ಶಾಸ್ತ್ರದಲ್ಲಿ, ಮನೆಯ ಹೆಸರು ಕೇವಲ ಒಂದು ಗುರುತಿನ ಚಿಹ್ನೆಯಷ್ಟೇ…

29 minutes ago

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

9 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

9 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

9 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

9 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

10 hours ago