Advertisement
ವೆದರ್ ಮಿರರ್

ಹವಾಮಾನ ವರದಿ | 02-01-2026 | ಮೋಡದ ವಾತಾವರಣಕ್ಕೆ ಕಾರಣವೇನು..? ಎಷ್ಟು ದಿನ ಇದೆ…?

Share

03.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಚಳಿ ಕಡಿಮೆ ಇದ್ದು, ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಈ ಮೋಡದ ವಾತಾವರಣವು ಜನವರಿ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸಣ್ಣ ಹನಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. ಈಗಿನಂತೆ ಜನವರಿ 3 ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಚಳಿ ಕಡಿಮೆ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಚಳಿ ಕಡಿಮೆಯಾಗಿ ಯಥಾ ಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 3ರ ತನಕ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಶಿಥಿಲಗೊಂಡಿದ್ದು, ಈಗ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಜನವರಿ 3 ರ ತನಕ ಮೋಡದ ವಾತಾವರಣ ಮಾತ್ರ ಇರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

17 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

18 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

18 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

18 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago