02.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಹಾಗೂ ಮಡಿಕೇರಿ ಘಾಟಿಯ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯಾಗಿತ್ತು. ಇವತ್ತು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ಮೋಡದ ಸ್ವಲ್ಪ ಜಾಸ್ತಿ ಇರಬಹುದು. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಜನವರಿ 5 ರಿಂದ ಬಿಸಿಲಿನ ವಾತಾವರಣ ಹೆಚ್ಚಾದರೂ 10 ನೇ ತಾರೀಕಿನಿಂದ ಮತ್ತೆ ಮೋಡ, ಮಳೆಯ ಮುನ್ಸೂಚನೆ ಇದೆ.
ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕೊಡಗು ಜಿಲ್ಲೆಯ ಅಲ್ಲಲ್ಲಿ ಮಧ್ಯಾಹ್ನ ನಂತರದಿಂದ ನಾಳೆ ಮುಂಜಾನೆ ತನಕ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 2 ರಂದು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜನವರಿ 4 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮೋಡ ಕಡಿಮೆಯಾದರೂ ಜನವರಿ 10 ರಿಂದ ಮತ್ತೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ. ಈಗಿನಂತೆ ಜನವರಿ 3 ರಿಂದ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ ಭಾಗಗಳಲ್ಲಿ ತಡ ರಾತ್ರಿ ಅಥವಾ ಮುಂಜಾನೆ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಜನವರಿ 5 ರಿಂದ ಸ್ವಚ್ಛ ವಾತಾವರಣದ ಸಾಧ್ಯತೆಗಳಿದ್ದರೂ 10 ರಿಂದ ಮತ್ತೆ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಮೇಲ್ ಸ್ಥರದ ವಾತಾವರಣದಲ್ಲಿ ಶ್ರೀಲಂಕಾ ಬಳಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಹಾಗೂ ಮಧ್ಯಮ ಸ್ತರದ ವಾತಾವರಣದಲ್ಲಿ ಉಷ್ಣ ಮಾರುತ ಪರಿಚಲನೆ ( ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಮುಂದುವರಿದ ಪರಿಣಾಮದಿಂದ ಈ ಮೋಡದ ವಾತಾವರಣ ಉಂಟಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.





