Advertisement
ಸುದ್ದಿಗಳು

ಹವಾಮಾನ ವರದಿ | 01-01-2026 | ಕೆಲವು ಕಡೆ ತುಂತುರು ಮಳೆಯ ಸಾಧ್ಯತೆ | ಈಗ ಮಳೆಯಾಗಲು ಕಾರಣವೇನು…?

Share

02.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಹಾಗೂ ಮಡಿಕೇರಿ ಘಾಟಿಯ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯಾಗಿತ್ತು.  ಇವತ್ತು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ಮೋಡದ ಸ್ವಲ್ಪ ಜಾಸ್ತಿ ಇರಬಹುದು. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಜನವರಿ 5 ರಿಂದ ಬಿಸಿಲಿನ ವಾತಾವರಣ ಹೆಚ್ಚಾದರೂ 10 ನೇ ತಾರೀಕಿನಿಂದ ಮತ್ತೆ ಮೋಡ, ಮಳೆಯ ಮುನ್ಸೂಚನೆ ಇದೆ.

ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕೊಡಗು ಜಿಲ್ಲೆಯ ಅಲ್ಲಲ್ಲಿ ಮಧ್ಯಾಹ್ನ ನಂತರದಿಂದ ನಾಳೆ ಮುಂಜಾನೆ ತನಕ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 2 ರಂದು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜನವರಿ 4 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮೋಡ ಕಡಿಮೆಯಾದರೂ ಜನವರಿ 10 ರಿಂದ ಮತ್ತೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ. ಈಗಿನಂತೆ ಜನವರಿ 3 ರಿಂದ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ ಭಾಗಗಳಲ್ಲಿ ತಡ ರಾತ್ರಿ ಅಥವಾ ಮುಂಜಾನೆ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಜನವರಿ 5 ರಿಂದ ಸ್ವಚ್ಛ ವಾತಾವರಣದ ಸಾಧ್ಯತೆಗಳಿದ್ದರೂ 10 ರಿಂದ ಮತ್ತೆ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಬಂಗಾಳಕೊಲ್ಲಿಯ ಮೇಲ್ ಸ್ಥರದ ವಾತಾವರಣದಲ್ಲಿ ಶ್ರೀಲಂಕಾ ಬಳಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಹಾಗೂ ಮಧ್ಯಮ ಸ್ತರದ ವಾತಾವರಣದಲ್ಲಿ ಉಷ್ಣ ಮಾರುತ ಪರಿಚಲನೆ ( ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಮುಂದುವರಿದ ಪರಿಣಾಮದಿಂದ ಈ ಮೋಡದ ವಾತಾವರಣ ಉಂಟಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

5 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

5 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

6 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

6 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

6 hours ago

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…

6 hours ago