ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?

February 16, 2024
1:15 PM

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್ (State Budget 2024) ನಲ್ಲಿ ಕನ್ನಡ (Kannada) ಮತ್ತು ಸಂಸ್ಕೃತಿಗೆ (Culture) ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಪ್ರತಿ ಬಜೆಟ್‌ನಲ್ಲೂ ಕನ್ನಡ ಮತ್ತು ಸಂಸ್ಕೃತಿಗೆ(Kannada & culture) ಹೆಚ್ಚು ಒತ್ತು ನೀಡಲಾಗುತ್ತದೆ. ಈ ಬಾರಿಯೂ ಸಿಎಂ, ಬಜೆಟ್‌ನಲ್ಲಿ ಅನೇಕ ಅನುದಾನಗಳನ್ನು ಘೋಷಣೆ ಮಾಡಿದ್ದಾರೆ.

Advertisement

ಕನ್ನಡ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದಡಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ವರ್ಷಪೂರ್ತಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿ ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು.

ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿಭಾಗದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕನ್ನಡ ಭಾಷೆ ಅಭಿವೃದ್ಧಿ ಮಾಡಲಾಗುವುದು. ತುಳು, ಕೊಡವ, ಬ್ಯಾರಿ ಮತ್ತು ಕೊಂಕಣಿ ಕರ್ನಾಟಕ ಪ್ರಾದೇಶಿಕ ಭಾಷೆಗಳಾಗಿದ್ದು, ಅವುಗಳ ಅಭಿವೃದ್ಧಿಗಾಗಿ ಅಕಾಡೆಮಿಗಳ ಮೂಲಕ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಪ್ರೋತ್ಸಾಹಿಸಲಾಗುವುದು.

ಸಂಸ್ಕೃತಿ ಅಳಿವಿನಂಚಿನಲ್ಲಿರುವ ಜಾನಪದ ಕಲಾಪ್ರಕಾರಗಳಾದ ದೊಡ್ಡಾಟ, ಸಣ್ಣಾಟ, ಶ್ರೀಕೃಷ್ಣ ಪಾರಿಜಾತ, ತೊಗಲು ಗೊಂಬೆಯಾಟ, ಸೂತ್ರದ ಗೊಂಬೆಯಾಟ, ಕರಗ ಮುಂತಾದವುಗಳ ಪುನರುಜ್ಜೀವನಕ್ಕಾಗಿ ತರಬೇತಿ ಮತ್ತು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುವುದು. ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರ ಕಲೆ ಮತ್ತು ಸಂಸ್ಕೃತಿಯನ್ನು ಗುರುತಿಸಿ, ಉಳಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಲೆಮಾರಿ ಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗುವುದು. ರಂಗಭೂಮಿಯ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಸ್ಥಾಪಿಸಲಾಗಿರುವ ರಂಗಾಯಣಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಉತ್ತೇಜನ ನೀಡಲಾಗುವುದು.

ಭಾರತದ ಪ್ರಸಿದ್ಧ ಸಾಮಾಜಿಕ ಮತ್ತು ರಾಜಕೀಯ ಚಿಂತಕರುಗಳಾದ ನಾರಾಯಣ ಗುರುಗಳು, ಜ್ಯೋತಿಬಾ ಫುಲೆ, ಪೆರಿಯಾರ್ ರಾಮಸ್ವಾಮಿ, ರಾಮ ಮನೋಹರ್ ಲೋಹಿಯಾ ಹಾಗೂ ಬಾಬು ಜಗಜೀವನರಾಮ್ ಅವರ ಬರಹಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಕಟಿಸಲಾಗುವುದು. ಸಂತ ಕವಿ ಕನಕದಾಸರ ಅಧ್ಯಯನ ಕೇಂದ್ರದ ಮೂಲಕ ತತ್ವಪದ, ಕೀರ್ತನ ಸಾಹಿತ್ಯ ಮತ್ತು ಭಕ್ತಿ ಚಳವಳಿ ಸೇರಿದಂತೆ ಸಾಹಿತ್ಯ ಸಮೀಕ್ಷೆ, ಸಂಗ್ರಹಣೆ, ಪ್ರಕಟಣೆ ಹಾಗೂ ಪ್ರಸಾರ ಕಾರ್ಯಕ್ರಮಗಳನ್ನು ಕೈಗೊಳ್ಳಲು ಒಂದು ಕೋಟಿ ರೂಪಾಯಿ ಒದಗಿಸಲಾಗುವುದು.

ತತ್ವಪದಕಾರರು ಮತ್ತು ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಮತ್ತು ಶಿವಯೋಗಿ ಸಿದ್ಧರಾಮೇಶ್ವರರವರ ಬದುಕು ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಲಾಗುವುದು.

– ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group