WhatsApp ತನ್ನ ಗ್ರಾಹಕರಿಗೆ ಪರಿಚಯಿಸಿದೆ “ಕಮ್ಯೂನಿಟಿ ಫೀಚರ್ಸ್‌” | ನಾವೂ Update ಆಗಿದ್ದೇವೆ ಈ ಫೀಚರ್‌ಗೆ |

November 12, 2022
6:44 PM

ಮೆಟಾ ಒಡೆತನದ  ವಾಟ್ಸ್​ಆ್ಯಪ್(Whats App ) ಈಗ ವಿನೂತನವಾದ ಅಪ್ಡೇಟ್ ಮೂಲಕ ತನ್ನ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡುತ್ತಿದೆ. ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಈ ನೂತನ ಪೀಚರ್‌ನೊಂದಿಗೆ ರೂರಲ್‌ ಮಿರರ್‌ ಕೂಡಾ Update ಆಗಿದೆ. ಹೀಗಾಗಿ ಇನ್ನು ಮುಂದೆ ಕಮ್ಯೂನಿಟಿ ಫೀಚರ್ಸ್‌ ಹೆಚ್ಚು ಸುಲಭವಾಗಿ ಸುದ್ದಿಗಳನ್ನು, ಮಾಹಿತಿಗಳನ್ನು ಹಂಚಲು ಸಾಧ್ಯವಾಗುತ್ತದೆ.

Advertisement

ಕಳೆದ ಕೆಲವು ಸಮಯಗಳಿಂದ ವಾಟ್ಸ್​ಆ್ಯಪ್ ಹೊಸ ಹೊಸ ಪೀಚರ್‌ಗಳ ಮೂಲಕ ಇನ್ನಷ್ಟು  ಜನಸ್ನೇಹಿಯಾಗುತ್ತಿದೆ. ಇದೀಗ ತನ್ನ ಗ್ರಾಹಕರಿಗೆ ಕಮ್ಯೂನಿಟಿ ಫೀಚರ್ಸ್‌  ಜಾಗತಿಕವಾಗಿ ಪರಿಚಯಿಸುತ್ತಿದೆ. ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು  ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ಈಗಾಗಲೇ ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ  ಹಾಗೂ ಇನ್ನಿತರ ಸೇವೆಯನ್ನು Update ಮಾಡಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಇದರ ಜೊತೆಗೆ ಸದ್ಯದಲ್ಲಿಯೇ  ವಾಟ್ಸಪ್‌ನಲ್ಲಿ ಡು ನಾಟ್‌ ಡಿಸ್ಟರ್ಬ್‌ ಎಂಬ ಹೊಸ ಫೀಚರ್‌ ಬರಲಿದೆ. ವಾಟ್ಸಪ್‌ ಅಪ್‌ಡೇಟ್‌ಗಳ ಕುರಿತು ಮಾಹಿತಿ ನೀಡುವ  ಬೀಟಾ ಪ್ರಕಾರ ವಾಟ್ಸಪ್‌ನಲ್ಲಿ ಮಿಸ್‌ ಕಾಲ್‌ ಕಿರಿಕಿರಿ ತಪ್ಪಿಸಲು  ಹೊಸ ಫೀಚರ್‌ ಬರಲಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group