ದೇಶದಲ್ಲಿ ಅಕ್ಕಿ, ಗೋಧಿ, ಗೋಧಿ ಹಿಟ್ಟು ಹಾಗೂ ಹಲವಾರು ಅಗತ್ಯ ಆಹಾರ ಉತ್ಪನ್ನಗಳ ಬೆಲೆಯು ಸಾರ್ವಕಾಲಿಕ ಏರಿಕೆಯಾಗಿದೆ. ಈ ಎಚ್ಚರಿಕೆಯ ಮಧ್ಯೆ ಕೇಂದ್ರ ಸರ್ಕಾರವು ಗೋಧಿ ಹಾಗೂ ಗೋಧಿ ಹಿಟ್ಟಿನ ಬೆಲೆಯನ್ನು ಇಳಿಸುವ ನಿಟ್ಟಿನಲ್ಲಿ ಸಂಗ್ರಹಿಸಿದ್ದ 30 ಲಕ್ಷ ಟನ್ ಗೋಧಿಯನ್ನು ಮಾರಾಟ ಮಾಡಲು ಅನುಮೋದನೆ ನೀಡಿದೆ. ಇದರಿಂದಾಗಿ ಗೋಧಿ ಹಿಟ್ಟಿನ ಬೆಲೆಯಲ್ಲಿ ಇಳಿಕೆ ಆಗಬಹುದು ಎಂದು ರೋಲರ್ ಫ್ಲೋರ್ ಮಿಲ್ಲರ್ಸ್ ಫೆಡರೇಶನ್ ಆಫ್ ಇಂಡಿಯಾ ತಿಳಿಸಿದೆ.
ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಆಹಾರ ಸಚಿವಾಲಯವು 30ಲಕ್ಷ ಟನ್ ಗೋಧಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ನೀಡಿದೆ. ಬೆಲೆ ಹೆಚ್ಚಳವನ್ನು ಕಡಿವಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಆಹಾರ ಇಲಾಖೆ ಕಾರ್ಯದರ್ಶಿ ಸಂಜೀವ್ ಚೋಪ್ರಾ ತಿಳಿಸಿದ್ದಾರೆ.ಗೋಧಿ ಮತ್ತು ಅಕ್ಕಿಯನ್ನು ಅಗತ್ಯಕ್ಕೆ ತಕ್ಕಂತೆ ಮುಕ್ತ ಮಾರುಕಟ್ಟೆಯಲ್ಲಿ ಗ್ರಾಹಕರು ಮತ್ತು ಖಾಸಗಿ ವ್ಯಾಪಾರಿಗಳಿಗೆ ಈ ಹಿಂದೆಯೇ ತಿಳಿಸಿದ್ದ ಅಥವಾ ತೀರ್ಮಾನ ಮಾಡಿದ್ದ ಬೆಲೆಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.