03.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಅಕ್ಟೊಬರ್ 3 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, 4 ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಕ್ಟೊಬರ್ 5ರ ತನಕ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದ್ದು, ನಂತರ ಕಡಿಮೆಯಾದರೂ, ಅಕ್ಟೊಬರ್ 8ರಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 4ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಆದರೆ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೊಬರ್ 6ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾಗಬಹುದು.
ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 4ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಅಕ್ಟೊಬರ್ 7 ಅಥವಾ 8ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಮುಂಗಾರು ಮಾರುತಗಳನ್ನು ದುರ್ಬಲಗೊಳಿಸಿತ್ತಿದೆ. ಇನ್ನೊಂದು ವಾರದಲ್ಲಿ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…
ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…