Advertisement
ವೆದರ್ ಮಿರರ್

ಹವಾಮಾನ ವರದಿ | 02-10-2025 | ಸದ್ಯ ಎಲ್ಲೆಲ್ಲಿ ಮಳೆ ಇದೆ…? | ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣ ಯಾವಾಗ…?

Share

03.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಅಕ್ಟೊಬರ್ 3 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, 4 ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಕ್ಟೊಬರ್ 5ರ ತನಕ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದ್ದು, ನಂತರ ಕಡಿಮೆಯಾದರೂ, ಅಕ್ಟೊಬರ್ 8ರಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 4ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಆದರೆ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೊಬರ್ 6ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾಗಬಹುದು.

ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 4ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಅಕ್ಟೊಬರ್ 7 ಅಥವಾ 8ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಮುಂಗಾರು ಮಾರುತಗಳನ್ನು ದುರ್ಬಲಗೊಳಿಸಿತ್ತಿದೆ. ಇನ್ನೊಂದು ವಾರದಲ್ಲಿ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

15 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago