ಹವಾಮಾನ ವರದಿ |13-10-2025 | ಹಿಂಗಾರು ಮಳೆ ಯಾವಾಗಿನಿಂದ ಆರಂಭ…?

October 13, 2025
1:11 PM

14.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಇವತ್ತು ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇರುವುದಿಲ್ಲ. ಈಗಿನಂತೆ ಅಕ್ಟೊಬರ್ 14ರಿಂದ ಕರಾವಳಿ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರಂಭವಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 15 ರಿಂದ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಇವತ್ತು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನ ಅಕ್ಟೊಬರ್ 14ರಿಂದ ಹಿಂಗಾರು ಮಳೆ ಆರಂಭವಾಗಲಿದೆ.

ಒಳನಾಡು : ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ (ಪಾವಗಢ ಸಹಿತ) ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ರಾಮನಗರ, ಮಂಡ್ಯ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಅಕ್ಟೊಬರ್ 14ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಹಾಗೂ 15 ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror