09.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಕರಾವಳಿಯಲ್ಲಿ ಈ ಗುಡುಗು ಸಹಿತ ಮಳೆಯು ಅಕ್ಟೊಬರ್ 11ರ ತನಕ ಉತ್ತರ ಕನ್ನಡ ಹಾಗೂ ಅಕ್ಟೊಬರ್ 12ರ ತನಕ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದರೂ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಕ್ಟೊಬರ್ 17 ರಿಂದ ಮತ್ತೆ ಗುಡುಗು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಕ್ಟೊಬರ್ 12ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 10ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 12 ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2 ಅಥವಾ 3 ದಿವಸಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆಗೆ ವೇಗ ಸಿಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…