Advertisement
ವೆದರ್ ಮಿರರ್

ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?

Share

09.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಕರಾವಳಿಯಲ್ಲಿ ಈ ಗುಡುಗು ಸಹಿತ ಮಳೆಯು ಅಕ್ಟೊಬರ್ 11ರ ತನಕ ಉತ್ತರ ಕನ್ನಡ ಹಾಗೂ ಅಕ್ಟೊಬರ್ 12ರ ತನಕ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದರೂ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಕ್ಟೊಬರ್ 17 ರಿಂದ ಮತ್ತೆ ಗುಡುಗು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಕ್ಟೊಬರ್ 12ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 10ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 12 ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2 ಅಥವಾ 3 ದಿವಸಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆಗೆ ವೇಗ ಸಿಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

4 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

4 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

4 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

4 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

20 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago