Advertisement
ಪ್ರಮುಖ

ಬಿಳಿ ಹಾತೆ ದಾಳಿಯಿಂದ ಸಂಕಷ್ಟದಲ್ಲಿರುವ ಭಾರತದ ತೆಂಗಿನ ಬೆಳೆ

Share

ಭಾರತದ ಪ್ರಮುಖ ತೆಂಗಿನ ಬೆಳೆ ಪ್ರದೇಶಗಳು ಗಂಭೀರವಾದ ವೈಟ್‌ಫ್ಲೈ ಅಥವಾ ಬಿಳಿ ಹಾತೆ (Rugose Spiralling Whitefly) ಕೀಟದ ದಾಳಿಯನ್ನು ಎದುರಿಸುತ್ತಿದ್ದು, ಇದರಿಂದ ತೆಂಗಿನ ಇಳುವರಿ ಕುಸಿತವಾಗುವ ಜೊತೆಗೆ ರೈತರ ಆದಾಯಕ್ಕೂ ಭಾರೀ ಹೊಡೆತ ಬೀರುತ್ತಿದೆ ಎಂದು ವರದಿಯಾಗಿದೆ.

2016ರಲ್ಲಿ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪತ್ತೆಯಾದ ಈ ವೈಟ್‌ಫ್ಲೈ ಕೀಟವು ತೆಂಗು, ಬಾಳೆ, ತಾಳೆ ಮುಂತಾದ ಬೆಳೆಗಳ ಎಲೆಗಳಿಂದ ರಸವನ್ನು ಹೀರಿ, ‘ಹನಿಡ್ಯೂ’ ಎಂಬ ಅಂಟು ದ್ರವವನ್ನು ಹೊರಸೂಸುತ್ತದೆ. ಇದರಿಂದ ಎಲೆಗಳ ಮೇಲೆ ಕಪ್ಪು ಬೂದಿ (sooty mould) ಬೆಳೆಯಾಗಿ, ಸಸ್ಯಗಳ ದ್ಯುತಿ ಸಂಶ್ಲೇಷಣೆಗೆ ಅಡ್ಡಿಯಾಗುತ್ತದೆ. ಪರಿಣಾಮವಾಗಿ ಬೆಳೆಗಳ ಆರೋಗ್ಯ ಕುಸಿದು ಇಳುವರಿ ತೀವ್ರವಾಗಿ ಕಡಿಮೆಯಾಗುತ್ತಿದೆ.

ದಕ್ಷಿಣ ಭಾರತದ ತೆಂಗಿನ ಬೆಳೆ ವಲಯಕ್ಕೆ ಆತಂಕ : ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುವ ತೆಂಗು, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಆದರೆ ವೈಟ್‌ಫ್ಲೈ ಹಾವಳಿಯಿಂದ ಅನೇಕ ತೋಟಗಳಲ್ಲಿ ಉತ್ಪಾದನೆ ಇಳಿಕೆಯಾಗಿದ್ದು, ಸಣ್ಣ ಮತ್ತು ಮಧ್ಯಮ ರೈತರು ಹೆಚ್ಚುತ್ತಿರುವ ಸಾಲಭಾರವನ್ನು ಎದುರಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೈಟ್‌ಫ್ಲೈ ನಿಯಂತ್ರಣಕ್ಕಾಗಿ ಕೆಲವು ಜೈವಿಕ ಮತ್ತು ರಾಸಾಯನಿಕ ಕ್ರಮಗಳನ್ನು ಶಿಫಾರಸು ಮಾಡಲಾಗಿದ್ದರೂ, ಅವುಗಳು  ನಿರೀಕ್ಷಿತ ಫಲ ನೀಡುತ್ತಿಲ್ಲ ಎಂಬುದು ರೈತರ ಅಳಲು. ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಕಾರ್ಮಿಕ ಕೊರತೆ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚಗಳು ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸುತ್ತಿವೆ. ತಜ್ಞರ ಪ್ರಕಾರ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು, ವಿಜ್ಞಾನ ಆಧಾರಿತ ಸಂಶೋಧನೆ ಮತ್ತು ಸರ್ಕಾರದ ನೆರವು ಇಲ್ಲದೆ ಈ ಸಮಸ್ಯೆಯನ್ನು ತಡೆಯುವುದು ಕಷ್ಟಸಾಧ್ಯವಾಗಿದೆ.

ವೈಟ್‌ಫ್ಲೈ ಸಮಸ್ಯೆ ಪರಿಹಾರವಾಗದಿದ್ದರೆ, ಭಾರತದ ತೆಂಗಿನ ಕೃಷಿ ಮಾತ್ರವಲ್ಲದೆ, ಗ್ರಾಮೀಣ ಆರ್ಥಿಕತೆಯ ಮೇಲೆಯೂ ದೀರ್ಘಕಾಲದ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ವರದಿ ನೀಡಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

20 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

20 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

20 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago