ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್‌ |‌ 66 ಮಕ್ಕಳ ಸಾವಿನ ನಂತರ WHO ಎಚ್ಚರಿಕೆ | ತನಿಖೆ ಆರಂಭಿಸಿದ ಭಾರತೀಯ ಔಷಧ ನಿಯಂತ್ರಕ ಸಂಸ್ಥೆ |

October 6, 2022
7:33 PM

ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿನ ಮಕ್ಕಳ ಸಾವಿಗೆ ಭಾರತೀಯ ಸಂಸ್ಥೆಯೊಂದು ತಯಾರಿಸುವ ಕೆಮ್ಮು ಸಿರಪ್‌ಗಳು ಕಾರಣವಾಗಿತ್ತು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಔಷಧಿ ನಿಯಂತ್ರಕ ಸಂಸ್ಥೆ (DCGI) ತನಿಖೆ ಆರಂಭಿಸಿದೆ. ಸಂಸ್ಥೆಯು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಗೆ ಕಳುಹಿಸಿದೆ.

Advertisement

ಹರ್ಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಉತ್ಪಾದಿಸಿದ  ನಾಲ್ಕು ಬಗೆಯ ಕೆಮ್ಮಿನ ಸಿರಪ್‌ ಕಾರಣದಿಂದ  ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ  ಬುಧವಾರ ಎಚ್ಚರಿಸಿತ್ತು. ಬಳಿಕ ಭಾರತೀಯ ಮೂಲದ ಆ ಕಂಪನಿಯು ತಯಾರಿಸಿದ ನಾಲ್ಕು ಜ್ವರ, ಶೀತ ಮತ್ತು ಕೆಮ್ಮು ಸಿರಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ, ಅವುಗಳನ್ನು ಬಳಸದಂತೆ ಜನರನ್ನು ಹೇಳಿದೆ. ಎಲ್ಲಾ ನಾಲ್ಕು ಸಿರಪ್‌ಗಳು ಹರಿಯಾಣ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್‌ನಿಂದ ತಯಾರಿಸಲ್ಪಟ್ಟಿದೆ. ನಾಲ್ಕು ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯು ಅವುಗಳು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ಮಾ ಹೊಂದಿದೆ ಎಂದು  ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಡೈಎಥಿಲೀನ್ ಗ್ಲೈಕಾಲ್ ಮತ್ತು ಎಥಿಲೀನ್ ಗ್ಲೈಕಾಲ್ ವಿಷಕಾರಿ ಪರಿಣಾಮಗಳನ್ನು ಉಂಟುಮಾಡಬಹುದು. ಇದರಲ್ಲಿ ಹೊಟ್ಟೆ ನೋವು, ವಾಂತಿ, ಅತಿಸಾರ, ತಲೆನೋವು, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸಾವಿಗೆ ಕಾರಣವಾಗಬಹುದು ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಭಾರತದಲ್ಲಿ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 17 ಮಕ್ಕಳ ಸಾವು ವರದಿಯಾಗಿದೆ. ಇನ್ನೊಂದು ಘಟನೆಯಲ್ಲಿ, ಕಳೆದ ವರ್ಷ ನವದೆಹಲಿಯಲ್ಲಿ ಕನಿಷ್ಠ ಮೂರು ಮಕ್ಕಳು  ಕೆಮ್ಮಿನ ಸಿರಪ್ ಅನ್ನು ಸೇವಿಸಿದ ನಂತರ ಸಾವನ್ನಪ್ಪಿದರು.

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |
May 14, 2025
7:29 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group