ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿನ ಮಕ್ಕಳ ಸಾವಿಗೆ ಭಾರತೀಯ ಸಂಸ್ಥೆಯೊಂದು ತಯಾರಿಸುವ ಕೆಮ್ಮು ಸಿರಪ್‌ಗಳು ಕಾರಣವಾಗಿತ್ತು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಔಷಧಿ ನಿಯಂತ್ರಕ ಸಂಸ್ಥೆ (DCGI) ತನಿಖೆ ಆರಂಭಿಸಿದೆ. ಸಂಸ್ಥೆಯು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಗೆ ಕಳುಹಿಸಿದೆ.
ಹರ್ಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಉತ್ಪಾದಿಸಿದ ನಾಲ್ಕು ಬಗೆಯ ಕೆಮ್ಮಿನ ಸಿರಪ್ ಕಾರಣದಿಂದ ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಸಿತ್ತು. ಬಳಿಕ ಭಾರತೀಯ ಮೂಲದ ಆ ಕಂಪನಿಯು ತಯಾರಿಸಿದ ನಾಲ್ಕು ಜ್ವರ, ಶೀತ ಮತ್ತು ಕೆಮ್ಮು ಸಿರಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ, ಅವುಗಳನ್ನು ಬಳಸದಂತೆ ಜನರನ್ನು ಹೇಳಿದೆ. ಎಲ್ಲಾ ನಾಲ್ಕು ಸಿರಪ್‌ಗಳು ಹರಿಯಾಣ ಮೂಲದ ಮೇಡನ್ ಫಾರ್ಮಾಸ್ಯುಟಿಕಲ್ಸ್‌ನಿಂದ ತಯಾರಿಸಲ್ಪಟ್ಟಿದೆ. ನಾಲ್ಕು ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯು ಅವುಗಳು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ಮಾ ಹೊಂದಿದೆ ಎಂದು ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಡೈಎಥಿಲೀನ್ ಗ್ಲೈಕಾಲ್ ಮತ್ತು ಎಥಿಲೀನ್ ಗ್ಲೈಕಾಲ್ ವಿಷಕಾರಿ ಪರಿಣಾಮಗಳನ್ನು ಉಂಟುಮಾಡಬಹುದು. ಇದರಲ್ಲಿ ಹೊಟ್ಟೆ ನೋವು, ವಾಂತಿ, ಅತಿಸಾರ, ತಲೆನೋವು, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸಾವಿಗೆ ಕಾರಣವಾಗಬಹುದು ಎಂದು ಆರೋಗ್ಯ ಸಂಸ್ಥೆ ಹೇಳಿದೆ.
ಭಾರತದಲ್ಲಿ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 17 ಮಕ್ಕಳ ಸಾವು ವರದಿಯಾಗಿದೆ. ಇನ್ನೊಂದು ಘಟನೆಯಲ್ಲಿ, ಕಳೆದ ವರ್ಷ ನವದೆಹಲಿಯಲ್ಲಿ ಕನಿಷ್ಠ ಮೂರು ಮಕ್ಕಳು ಕೆಮ್ಮಿನ ಸಿರಪ್ ಅನ್ನು ಸೇವಿಸಿದ ನಂತರ ಸಾವನ್ನಪ್ಪಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…