ಜಾಗತಿಕ ಆಹಾರ ಕೊರತೆಯ ಸಮಸ್ಯೆ ಕುರಿತಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ಚರ್ಚಿಸಿರುವುದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ವಿಶ್ವಕ್ಕೆ ಆಹಾರ ದಾಸ್ತಾನು ಸರಬರಾಜು ಮಾಡಲು ಭಾರತ ಸಿದ್ಧವಿರುವುದಾಗಿ ಹೇಳಿದ್ದಾರೆ.
ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ ಅನುಮತಿ ನೀಡಿದರೆ ಭಾರತ ವಿಶ್ವಕ್ಕೆ ಆಹಾರ ಸರಬರಾಜು ಮಾಡಲು ಸಿದ್ಧ ಎಂದು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಸ್ಟೆಲ್ ಮತ್ತು ಶ್ರೀ ಅನ್ನಪೂರ್ಣ ಧಾಮ್ ಶಿಕ್ಷಣ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ವೇಳೆ ಈ ವಿಚಾರ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಜಗತ್ತಿನ ವಿವಿಧ ದೇಶಗಳಲ್ಲಿ ಆಹಾರ ದಾಸ್ತಾನು ಕೊರತೆ ಕಾಣಿಸಿಕೊಂಡಿದೆ. ಇದೀಗ ಜಗತ್ತು ಹೊಸ ಸಮಸ್ಯೆಯನ್ನು ಎದುರಿಸುವಂತಾಗಿದೆ. ಜಾಗತಿಕವಾಗಿ ಆಹಾರ ದಾಸ್ತಾನು ಖಾಲಿಯಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಾ ಈ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಒಂದು ವೇಳೆ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿ) ಅನುಮತಿ ನೀಡಿದರೆ ಭಾರತ ನಾಳೆಯಿಂದಲೇ ಆಹಾರ ದಾಸ್ತಾನು ಸರಬರಾಜು ಮಾಡಲು ಸಿದ್ಧವಿರುವುದಾಗಿ ಸಲಹೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…