Advertisement
ವೆದರ್ ಮಿರರ್

ಹವಾಮಾನ ವರದಿ | 31-12-2025 | ಸದ್ಯ ಮೋಡದ ಪರಿಸ್ಥಿತಿ ಏಕೆ..? ಮಳೆಯಾಗಬಹುದೇ..? ಇನ್ನು ಚಳಿ ಹೇಗಿದೆ..?

Share

01.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. ಈಗಿನಂತೆ ಈ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಲಕ್ಷಣಗಳಿವೆ. ನಂತರ ಮೋಡ ಕಡಿಮೆಯಾದರೂ ಚಳಿಯ ವಾತಾವರಣ ಆವರಿಸಲು ಸ್ವಲ್ಪ ಸಮಯ ಬೇಕಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮೋಡದ ವಾತಾವರಣವು 2026 ಜನವರಿ 4ರ ತನಕ ಮುಂದುವರಿಯಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ವಿರಳವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಛಳಿಯ ಪ್ರಮಾಣವು ಕಡಿಮೆಯಾಗಲಿದೆ.  ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 3ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.  ಈಗಿನಂತೆ ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಜನವರಿ 1ರಂದು ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು 2026ರ ಜನವರಿ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. …… ಮುಂದೆ ಓದಿ……

ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಉಂಟಾದ ಪರಿಣಾಮದಿಂದ ರಾಜ್ಯದಲ್ಲಿ ಮೋಡದ ವಾತಾವರಣ ಸೃಷ್ಟಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

13 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

13 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

13 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

13 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago