ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.
ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಮಾತನಾಡಿದ ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.
ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…
ರಾಜಧಾನಿ ಬೆಂಗಳೂರು ಸೇರಿದಂತೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು, ಬೃಹತ್ ಬೆಂಗಳೂರು…
21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…