ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಎಂಬವರನ್ನು ಬಂಧಿಸಬೇಕೆಂದು ಒತ್ತಾಯಿಸಿ ದೇಶದ ಕುಸ್ತಿಪಟುಗಳು ಹೋರಾಟ ಮಾಡುತ್ತಿದ್ದಾರೆ. ಇದೀಗ ಈ ಹೋರಾಟ ತೀವ್ರಗೊಂಡಿದ್ದು, ತಮಗೆ ಲಭಿಸಿ ಪದಕಗಳನ್ನು ಗಂಗಾನದಿಗೆ ವಿಸರ್ಜನೆ ಮಾಡುವುದಾಗಿ ಘೋಷಿಸಿದ್ದರು. ಕೊನೆಯ ಕ್ಷಣದಲ್ಲಿ ರೈತ ನಾಯಕ ನರೇಶ್ ಟಿಕಾಯತ್ ಮನವಿ ಮೇರೆಗೆ ಪದಕ ವಿಸರ್ಜನೆಯನ್ನು ಮುಂದೂಡಿದ್ದಾರೆ. ಇಷ್ಟೆಲ್ಲಾ ಹೋರಾಟದ ಹಿಂದಿನ ಕಾರಣ ಏನು ?
ಲೈಂಗಿಕ ಕಿರುಕುಳ ಆರೋಪದ ಮೇಲೆ ತಮ್ಮ ಫೆಡರೇಶನ್ ಮುಖ್ಯಸ್ಥರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದ್ದ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಹಲವಾರು ಪ್ರಮುಖ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದರು. ಅದಾದ ಬೆನ್ನಲ್ಲೇ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆದು ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.
ಹಲವಾರು ಮಹಿಳಾ ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಮುಂದಿಟ್ಟು ಕಳೆದ ಏಪ್ರಿಲ್ 23 ರಿಂದ ಕುಸ್ತಿಪಟುಗಳು ತಮ್ಮ ಪ್ರತಿಭಟನೆ ಆರಂಭಿಸಿದ್ದರು. ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಜನವರಿಯಲ್ಲಿ ಬೀದಿಗಿಳಿದಿದ್ದರು.ಅದಾದ ಬಳಿಕ ಕೆಲ ಕಾಲ ಚರ್ಚೆಯಲ್ಲಿದ್ದ ಪ್ರಕರಣವು ಮತ್ತೆ ಕಾವು ಪಡೆದಿತ್ತು. ಈ ನಡುವೆ ಬಿಜೆಪಿ ಸಂಸದರಾಗಿರುವ ಸಿಂಗ್ ಅವರ ಕ್ರೀಡಾ ಸಚಿವಾಲಯದ ಎಲ್ಲಾ ಆಡಳಿತಾತ್ಮಕ ಅಧಿಕಾರಗಳನ್ನು ಹಿಂಪಡೆದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಅದಾದ ಬಳಿಕ ಯಾವ ಕ್ರಮವೂ ಆಗಿರಲಿಲ್ಲ. ಹೀಗಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಂಧನಕ್ಕೆ ಒತ್ತಾಯಿಸಿ ಏಪ್ರಿಲ್ 23 ರಂದು ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು. ಅದು ತೀವ್ರ ಸ್ವರೂಪ ಪಡೆದು ನೂತನ ಸಂಸತ್ತಿನ ಕಟ್ಟಡದ ಉದ್ಘಾಟನಾ ದಿನದಂದೂ ಸಂಸತ್ ಭವನದ ಮುಂದೆ ಪ್ರತಿಭಟನೆ ಆಯೋಜನೆಗೊಂಡಿತ್ತು. ಅದನ್ನು ಪೊಲೀಸರು ತಡೆದ ಕಾರಣದಿಂದ ಮತ್ತೆ ದೇಶದಾದ್ಯಂತ ಈ ಪ್ರತಿಭಟನೆ ಸುದ್ದಿಯಾಯಿತು. ಅನುಮತಿ ಇಲ್ಲದೆಯೇ ಸಂಸತ್ ಭವನದ ಮುಂದೆ ಪ್ರತಿಭಟನೆ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದರು.
ಆ ಬಳಿಕ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿತು, ದೇಶ ಮಾತ್ರವಲ್ಲ ವಿದೇಶದಲ್ಲೂ ಭಾರತದ ಕುಸ್ತಿಪಟುಗಳ ಹೋರಾಟವು ಸುದ್ದಿಯಾಯಿತು. ಮಂಗಳವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆದು ಪೊಲೀಸರ ಕ್ರಮವನ್ನು ಖಂಡಿಸಿ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.
ಈ ಕುಸ್ತಿಪಟುಗಳು ಏಪ್ರಿಲ್ 23 ರಂದು ಪ್ರತಿಭಟನೆಯನ್ನು ಪ್ರಾರಂಭಿಸಿ, ಅಪ್ರಾಪ್ತ ಹಾಗೂ ವಯಸ್ಕ ಮಹಿಳಾ ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳದ ಆಧಾರದ ಮೇಲೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು. ಕಳೆದ ವಾರ ಈ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಂಡಿದೆ.
ಈ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಹಾಗೂ ತಿಂಗಳ ಕಾಲ ದೇಶದ ಕ್ರೀಡಾಪಟುಗಳು ಹೋರಾಟ ನಡೆಸುತ್ತಿದ್ದಾಗ ಸಹಜವಾಗಿಯೇ ವಿರೋಧ ಪಕ್ಷದ ಪ್ರಮುಖರೂ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ವಿರೋಧ ಪಕ್ಷದ ನಾಯಕರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ್ದರು.
ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕು ಎಂಬ ಒತ್ತಾಯದ ನಡುವೆಯೇ ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆದು ಪ್ರತಿಭಟನೆ ತೀವ್ರಗೊಳಿಸುವುದಾಗಿ ಹೇಳಿ, ಮಂಗಳವಾರ ಗಂಗಾನದಿಗೆ ಎಸೆಯುವ ಸಿದ್ಧತೆ ನಡೆಸಿದ್ದರು, ಈ ಸಂದರ್ಭ ಕೃಷಿ ನಾಯಕ ನರೇಶ್ ಟಿಕಾಯಿತ್ ಮಧ್ಯಪ್ರವೇಶಿಸಿ, ಪದಕಗಳನ್ನು ಎಸೆಯದಂತೆ ಕುಸ್ತಿಪಟುಗಳ ಮನವೊಲಿಸಿ, ಮುಂದಿನ 5 ದಿನ ಸಮಯ ಕೇಳಿದರು, ಮುಂದಿನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.
ಈ ಎಲ್ಲದರ ನಡುವೆ ಈ ಹೋರಾಟವು ರಾಜಕೀಯ ಪ್ರೇರಿತ ಎಂದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸರ್ಕಾರವು ಇದುವರೆಗೂ ಯಾವುದೇ ಕ್ರ ಕೈಗೊಂಡಿಲ್ಲ, ಪ್ರತಿಕ್ರಿಯೆಯನ್ನೂ ನೀಡಿಲ್ಲ. ಈ ನಡುವೆ ಹಲವು ಪ್ರಶ್ನೆಗಳನ್ನು ಹರಿಯಬಿಟ್ಟಿದ್ದಾರೆ, ಈ ಹೋರಾಟವು ಇನ್ನೊಂದು ಟೂಲ್ ಕಿಟ್ ಆಗಿದೆ ಎಂದು ಛೇಡಿಸಿದೆ. ಹೋರಾಟದಲ್ಲಿ ಕೇವಲ ಹರಿಯಾಣದ 3 ಕುಸ್ತಿ ಪಟುಗಳು ಯಾಕಿದ್ದಾರೆ? ಬೇರೆ ರಾಜ್ಯದ ಕುಸ್ತಿ ಪಟುಗಳು ಯಾಕೆ ಇವರ ಜೊತೆ ಭಾಗವಹಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ. ದೇಶದ ಹೆಮ್ಮೆಯ ಕ್ರೀಡಾಪಟು ಪಿ ಟಿ ಉಷಾ ಅವರು ಬೆಂಬಲ ಸೂಚಿಸಿ , ಸಮಸ್ಯೆ ಬಗ್ಗೆ ಕೇಳಲು ಬಂದಾಗ ಅವರನ್ನು ಅವಮಾನಿಸಿದ್ದೇಕೆ ಎಂದು ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…