ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ | ದ ಕ ಜಿಲ್ಲಾಧಿಕಾರಿ ಭೇಟಿ

July 17, 2025
8:20 PM

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆ ಗುಡ್ಡ ಜರಿತ, ನೆರೆ, ಮನೆ ಕುಸಿತ ಮತ್ತಿತರ ಘಟನೆಗಳು ನಡೆದಿರುವ ಸ್ಥಳಗಳಿಗೆ  ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಗುರುವಾರ ಭೇಟಿ ನೀಡಿದರು.

Advertisement

ನಗರದ ಸಕ್ರ್ಯೂಟ್ ಹೌಸ್ ಪಕ್ಕದ ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ  ಜಿಲ್ಲಾಧಿಕಾರಿಗಳು  ಬುಧವಾರ ಮಧ್ಯರಾತ್ರಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ನಗರದ ವಿವಿಧ ಕಡೆ ಮಳೆಹಾನಿ ಮತ್ತು ನೀರು ನಿಂತ ಸ್ಥಳಗಳಿಗೆ ಭೇಟಿ ನೀಡಿದರು. ಪಂಪ್‍ವೆಲ್  ವೃತ್ತಕ್ಕೆ ಭೇಟಿ ನೀಡಿದ ಅವರು  ನೀರು ನಿಂತು ಸಂಚಾರಕ್ಕೆ ಅಡಚಣೆಯಾಗುವುದನ್ನು ಗಮನಿಸಿ  ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಲು ನಗರಪಾಲಿಕೆಗೆ ಸೂಚಿಸಿದರು. ಕೊಟ್ಟಾರ, ಚೌಕಿ, ಕಾವೂರು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಮಾಧಾನ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳು ಬಜ್ಪೆ ಸಮೀಪದ ಕೊಂಚಾರು ಎಂ.ಎಸ್.ಇ.ಝೆಡ್ ಪ್ರದೇಶದಲ್ಲಿ ಗುಡ್ಡ ಕುಸಿತ  ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಇಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ  ಎಸ್.ಇ.ಝೆಡ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಬಳಿಕ ಕೆಂಜಾರು ಕೋಸ್ಟ್‍ಗಾರ್ಡ್‍ಗೆ   ಕಾದಿರಿಸಿದ ಪ್ರದೇಶದಲ್ಲಿ ನೀರು ನಿಂತ ಸ್ಥಳವನ್ನು ಪರಿಶೀಲಿಸಿದರು. ಮಳೆ ಹಾನಿಯಿಂದ ತೊಂದರೆಗಳಾದ ಸಂತ್ರಸ್ತರೊಂದಿಗೆ ಜಿಲ್ಲಾಧಿಕಾರಿಗಳು ಸಮಾಲೋಚಿಸಿ  ಅಗತ್ಯವಿರುವ ಎಲ್ಲಾ ನೆರವು ಮತ್ತು ಪರಿಹಾರವನ್ನು ಒದಗಿಸುವುದಾಗಿ   ಭರವಸೆ ನೀಡಿದರು.

ಆಯಾ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ  ಅವರು ಸೂಚನೆ ನೀಡಿದರು. ರಸ್ತೆ ಸಂಚಾರಕ್ಕೆ ಅಡಚಣೆಯಾಗಿರುವ  ಕಡೆ ತಾತ್ಕಾಲಿಕ ಮತ್ತು ಶಾಶ್ವತ ಕ್ರಮಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

Advertisement

ಜಿಲ್ಲಾಧಿಕಾರಿ ಭೇಟಿ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ  ವಿನಾಯಕ್ ಕರ್ಭಾರಿ , ಅಪರ ಜಿಲ್ಲಾಧಿಕಾರಿ  ಡಾ. ಜಿ ಸಂತೋಷ್ ಕುಮಾರ್,    ಮಂಗಳೂರು ಉಪವಿಭಾಗಾಧಿಕಾರಿ  ಹರ್ಷವರ್ಧನ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್  ಮತ್ತಿತರರು ಇದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group