ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ ಮೃತರ ಮನೆಗೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರು ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಣೆ ಮಾಡಿದ್ದರು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿ ಬಗ್ಗೆ ಜಿಲ್ಲಾ ವಲಯ ಅರಣ್ಯ ಅಧಿಕಾರಿ ರಮೇಶ್ ಬಾಬು ಮಾಹಿತಿ ನೀಡಿದ್ದು ಕಾಡಾನೆಗಳ ಸಂತತಿ ಇತ್ತಿಚಿನ ವರ್ಷಗಳಲ್ಲಿ ಹೆಚ್ಚಾಗಿದ್ದು ನೀರು ಆಹಾರ ಅರಸಿ ಗ್ರಾಮಗಳ ಬಳಿ ಬರುತ್ತಿವೆ. ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ತಂಡ ಕಾರ್ಯನಿರ್ವಹಿಸುತ್ತಿದ್ದು ಮುತ್ತೋಡಿ ಅರಣ್ಯಕ್ಕೆ ಅನೆಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel