ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಾಡಾನೆ ಸೆರೆಗೆ ಹಗಲಿರುಳೆನ್ನದೆ ಶ್ರಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಎಲ್ಲಾ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವನ್ಯಜೀವಿ ಮಾನವ ಸಂಘರ್ಷದ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಆನೆಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ರೈಲ್ವೆ ಹಳಿಗಳ ಸಮೀಪ ಬೇಲಿ ಹಾಕುವುದು, ಕಾಡುಪ್ರಾಣಿಗಳಿಗೆ ಅರಣ್ಯದಲ್ಲೇ ಮೇವು, ನೀರು ಒದಗಿಸುವತ್ತ ಅರಣ್ಯ ಇಲಾಖೆ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel