Advertisement
ಸುದ್ದಿಗಳು

Wild Life Conservation | ವನ್ಯಜೀವಿ ಸಂರಕ್ಷಣೆಗೆ ರಾಜ್ಯದಲ್ಲಿ ಮಹತ್ವದ ಹೆಜ್ಜೆ | ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತದೆ?

Share

ರಾಜ್ಯ ಸರ್ಕಾರವು ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಕಠಿಣ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇದೀಗ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ, ಬೆಂಗಳೂರು, ಹಾಸನ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ನಗರ, ತುಮಕೂರು, ಕೊಪ್ಪ ಹಾಗೂ ಶಿವಮೊಗ್ಗ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯರಾಗಿರುತ್ತಾರೆ.

ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ವನ್ಯಜೀವಿಗಳ ಅಂಗಾಂಗ, ಅವಶೇಷಗಳ ಮಾರಾಟ ಅಥವಾ ಬಳಕೆಗೆ ಸಂಪೂರ್ಣ ನಿಷೇಧವಿದೆ. ಯಾವುದೇ ಜೀವಿಯನ್ನು ಜೀವಂತವಾಗಿ ಅಥವಾ ಮೃತಪಟ್ಟ ಬಳಿಕ ಮಾರಾಟ ಮಾಡುವಂತಿಲ್ಲ. ಕಾಡು ಪ್ರಾಣಿಗಳ ಚರ್ಮವನ್ನು ಹದ ಮಾಡಿ ಅಲಂಕಾರಿಕ ವಸ್ತುಗಳಾಗಿ ಬಳಸುವಂತಿಲ್ಲ. ವನ್ಯಜೀವಿಗಳ ಮಾಂಸ ಮಾರಾಟ ಹಾಗೂ ಭಕ್ಷಣೆ ಸಹ ಅಪರಾಧ. ಹಾವಿನ ವಿಷವನ್ನೂ ಸಂಗ್ರಹ ಮಾಡುವಂತಿಲ್ಲ. ನವಿಲು ಗರಿಗಳನ್ನೂ ಸಂಗ್ರಹಿಸುವಂತಿಲ್ಲ. ವನ್ಯಜೀವಿಗಳ ಕೂದಲು, ಚರ್ಮ, ಉಗುರು, ಗೊರಸು, ಹಲ್ಲು, ಆನೆ ದಂತ ಸೇರಿದಂತೆ ದೇಹದ ಯಾವುದೇ ಭಾಗವನ್ನು ಸಂಗ್ರಹಿಸುವುದು, ಸಾಗಿಸುವುದು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

A high-level committee has been formed to create public awareness and to submit a comprehensive report on the measures to be taken to prevent the sale of products and items made from any organ of wildlife including tiger claws and tiger teeth.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

6 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

6 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

6 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

15 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

15 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

17 hours ago