ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು(Tiger nail) ಪ್ರಕರಣ ಭಾರಿ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರ(Govt) ಈಗ ಮಹತ್ವದ ಆದೇಶ ನೀಡಿದೆ. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.
ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.
– ಅಂತರ್ಜಾಲ ಮಾಹಿತಿ
Forest Minister Eshwara Khandre has given a dead line to return the wild animal organs to those who have illegally kept the organs of wild animals without any permit.