ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಅಮೂಲ್ಯ ಜೀವ ಹಾಗೂ ಕೃಷಿ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಆಯ್ದ ಪ್ರದೇಶಗಳಲ್ಲಿ ನಿರ್ದಿಷ್ಟ ವನ್ಯಜೀವಿಗಳ ಸಂತಾನ ನಿಯಂತ್ರಣ ಕುರಿತು ಚರ್ಚೆ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲಾಗುತ್ತಿರುವ ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ದುಬಾರೆ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ದುಬಾರೆ ಹಾಡಿಯ ಸುಮಾರು 150 ಮನೆಗಳ ನಿವಾಸಿಗಳು ತುರ್ತು ಸಂದರ್ಭದಲ್ಲಿ ನಗರ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ₹7.30 ಕೋಟಿ ವೆಚ್ಚದಲ್ಲಿ ಗುಣಮಟ್ಟದ ತೂಗುಸೇತುವೆ ನಿರ್ಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮೂಲಕ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.
ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಚಿಸಲಾಗಿದ್ದ ತಜ್ಞರ ಸಮಿತಿ ಈಗಾಗಲೇ ವರದಿ ಸಲ್ಲಿಸಿದ್ದು, ಈ ವಿಷಯದಲ್ಲಿ ಕಾಡಂಚಿನ ಜನರು ಹಾಗೂ ಸಾರ್ವಜನಿಕರು ಕೂಡ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಸಚಿವರು ಮನವಿ ಮಾಡಿದರು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಇನ್ನಷ್ಟು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಅರಣ್ಯವಾಸಿಗಳು ಹಾಗೂ ಅರಣ್ಯದಂಚಿನ ಜನರು ಹಲವು ವರ್ಷಗಳಿಂದ ಅರಣ್ಯವನ್ನು ಸಂರಕ್ಷಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದಿಂದ ಅಮೂಲ್ಯ ಜೀವಹಾನಿ ಸಂಭವಿಸುತ್ತಿದ್ದು, ಜನರ ಜೀವ ರಕ್ಷಣೆ ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಸಚಿವರು ಸೂಚನೆ ನೀಡಿದರು.
Karnataka Forest Minister Eshwar B. Khandre said discussions are needed among experts and the public regarding wildlife population control in selected regions to reduce crop damage and human casualties caused by increasing human-animal conflict. He also announced infrastructure measures including elephant barriers and a new suspension bridge at Dubare in Kodagu district.

