Advertisement
MIRROR FOCUS

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

Share

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಅಮೂಲ್ಯ ಜೀವ ಹಾಗೂ ಕೃಷಿ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಆಯ್ದ ಪ್ರದೇಶಗಳಲ್ಲಿ ನಿರ್ದಿಷ್ಟ ವನ್ಯಜೀವಿಗಳ ಸಂತಾನ ನಿಯಂತ್ರಣ ಕುರಿತು ಚರ್ಚೆ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲಾಗುತ್ತಿರುವ ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ದುಬಾರೆ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ದುಬಾರೆ ಹಾಡಿಯ ಸುಮಾರು 150 ಮನೆಗಳ ನಿವಾಸಿಗಳು ತುರ್ತು ಸಂದರ್ಭದಲ್ಲಿ ನಗರ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ₹7.30 ಕೋಟಿ ವೆಚ್ಚದಲ್ಲಿ ಗುಣಮಟ್ಟದ ತೂಗುಸೇತುವೆ ನಿರ್ಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮೂಲಕ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಚಿಸಲಾಗಿದ್ದ ತಜ್ಞರ ಸಮಿತಿ ಈಗಾಗಲೇ ವರದಿ ಸಲ್ಲಿಸಿದ್ದು, ಈ ವಿಷಯದಲ್ಲಿ ಕಾಡಂಚಿನ ಜನರು ಹಾಗೂ ಸಾರ್ವಜನಿಕರು ಕೂಡ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಸಚಿವರು ಮನವಿ ಮಾಡಿದರು.ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಇನ್ನಷ್ಟು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಅರಣ್ಯವಾಸಿಗಳು ಹಾಗೂ ಅರಣ್ಯದಂಚಿನ ಜನರು ಹಲವು ವರ್ಷಗಳಿಂದ ಅರಣ್ಯವನ್ನು ಸಂರಕ್ಷಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದಿಂದ ಅಮೂಲ್ಯ ಜೀವಹಾನಿ ಸಂಭವಿಸುತ್ತಿದ್ದು, ಜನರ ಜೀವ ರಕ್ಷಣೆ ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಸಚಿವರು ಸೂಚನೆ ನೀಡಿದರು.

Karnataka Forest Minister Eshwar B. Khandre said discussions are needed among experts and the public regarding wildlife population control in selected regions to reduce crop damage and human casualties caused by increasing human-animal conflict. He also announced infrastructure measures including elephant barriers and a new suspension bridge at Dubare in Kodagu district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

8 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

12 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

13 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago