ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

October 27, 2023
3:41 PM
ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಚರ್ಚೆಯ ವಿಷಯ. ಈಗ ಜೀವಂತ ವನ್ಯಪ್ರಾಣಿಯ ರಕ್ಷಣೆಯ ಕಡೆಗೂ ಇಲಾಖೆಗಳು ಮನಸ್ಸು ಮಾಡಬೇಕಿದೆ ಎಂಬ ಒತ್ತಾಯಗಳು ಕೇಳಿಬರುತ್ತಿದೆ.

ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.

Advertisement
Advertisement

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

Advertisement

ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು,  ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.

ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.

Advertisement
The Wildlife Protection Act is now the subject of discussion. Now there are demands that the departments should think about the protection of the living wildlife.
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror