ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.
ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು, ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.
ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.
The Wildlife Protection Act is now the subject of discussion. Now there are demands that the departments should think about the protection of the living wildlife.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…